ದೆಹಲಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ನವೆಂಬರ್ 10 ರಂದು ದೆಹಲಿಯ ವಿಶೇಷ ಪೂಲೀಸ್ ಘಟಕವಾದ ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ ಪ್ರಕರಣದ ದಾಖಲಿಸಿ ತನಿಖೆ ಆರಂಭಿಸಿತ್ತು. ಇದೀಗ ಈ ವಿಡಿಯೋದ ಸೃಷ್ಟಿಕರ್ತ ಎಂದು ಶಂಕಿಸಲಾಗಿರುವ ಆರೋಪಿಯನ್ನು ದಕ್ಷಿಣ ಭಾರತದಲ್ಲಿ ಬಂಧಿಸಿ ದೆಹಲಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.


























































