ನವದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಭಾಗವಹಿಸುವುದಿಲ್ಲ.
ಈ ಬಗ್ಗೆ ಸಾಮಾಜಿಕ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಜೆಪಿ ನಡ್ಡಾ ಅವರು, ತಮ್ಮನ್ನು ಜನವರಿ 22ರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಕ್ಕಾಗಿ ದೇವಾಲಯದ ನಿರ್ಮಾಣ ಮತ್ತು ನಿರ್ವಹಣೆಯ ಉಸ್ತುವಾರಿ ವಹಿಸಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಧನ್ಯವಾದ ತಿಳಿಸಿದ್ದಾರೆ.
ಇದೇ ವೇಳೆ, ಜೆಪಿ ನಡ್ಡಾ ಅವರು ಅಯೋಧ್ಯೆಯ ದೇಗುಲ ಲೋಕಾರ್ಪಣೆ ಸಮಾರಂಭದಲ್ಲಿ ಪ್ರತ್ಯಕ್ಷವಾಗಿ ಭಾಗವಹಿಸದಿದ್ದರೂ, ದೆಹಲಿಯ ಝಾಂಡೇವಾಲನ್ ದೇವಸ್ಥಾನದಲ್ಲಿ ಐತಿಹಾಸಿಕ ಘಟನೆಯನ್ನು ವೀಕ್ಷಿಸಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷರ ಆಪ್ತ ಮೂಲಗಳು ತಿಳಿಸಿವೆ,


























































