ಚಿಕ್ಕಮಗಳೂರು: ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆಸುಮಾರು 4.75 ಲಕ್ಷ ರೂ ಹಣವನ್ನು ಹಿಂದಿರುಗಿಸುವಂತೆ ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿದೆ. ‘ಹಿರೇಮಗಳೂರು ಕೋದಂಡ ರಾಮಚಂದ್ರ ದೇಗುಲಕ್ಕೆ 2013-14ನೇ ಸಾಲಿನಿಂದ ಈವರೆಗೆ 5.10 ಲಕ್ಷ ಸಂಗ್ರಹವಾಗಿದೆ. ಅದೇ ಅವಧಿಯಲ್ಲಿ ತಮಗೆ ತಸ್ತೀಕ್ ಮೊತ್ತವಾಗಿ ಒಟ್ಟು 8.10 ಲಕ್ಷ ಪಾವತಿಸಲಾಗಿದೆ. ದೇವಾಲಯದ ವಾರ್ಷಿಕ ಆದಾಯಕ್ಕಿಂತ ವೆಚ್ಚ ಜಾಸ್ತಿ ಇದೆ. ಸರ್ಕಾರದಿಂದ ಬಿಡುಗಡೆಯಾಗಿರುವ ಮೊತ್ತಕ್ಕಿಂತ ಹೆಚ್ಚುವರಿ ತಮ್ಮ ಖಾತೆಗೆ ಜಮಾ ಮಾಡಲಾಗಿದೆ. ಆದ್ದರಿಂದ ಬಾಕಿ 4.74 ಲಕ್ಷ ಹಿಂದಿರುಗಿಸಬೇಕು’ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
© 2020 Udaya News – Powered by RajasDigital.