ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಸೇತುವೆಗೆ ಕಾರು ಡಿಕ್ಕಿಯಾಗಿ ಮೂವರು ಪುಟ್ಟ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರಿಗೆ ಹಾನಿಯಾಗಿದ್ದು, ಕಾರಿನಲ್ಲಿದ್ದ 5 ತಿಂಗಳ ಹಯ್ಯಾಳಪ್ಪ, 3 ತಿಂಗಳ ರಕ್ಷಾ, 2 ವರ್ಷದ ಸಿಂಧುಶ್ರೀ ಹಾಗೂ 26 ವರ್ಷದ ಲಿಂಗಪ್ಪ ಎಂಬವರು ಸಾವನ್ನಪ್ಪಿದ್ದಾರೆ. ಮೃತರು ರಾಯಚೂರು ಜಿಲ್ಲೆ ದೇವದುರ್ಗ ಸಮೀಪದ ದಂಡಮ್ಮನಹಳ್ಳಿಯವರು ಎನ್ನಲಾಗಿದೆ.
ಸ್ಥಳಕ್ಕೆ ಚಳ್ಳಕೆರೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


























































