ಕಲಬುರಗಿ: ಬಿಜೆಪಿ ಫೈರ್ ಬ್ರಾಂಡ್ ನಾಯಕನಿಗೆ ರಾಜ್ಯ ಸರ್ಕಾರ ಪ್ರಹಾರ ಮಾಡಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಶುಗರ್ ಫ್ಯಾಕ್ಟರಿ ಮುಚ್ಚಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.
ಮಾಲಿನ್ಯ ನಿಯಂತ್ರಣ ಕುರಿತ ನಿಯಮಾವಳಿ ಉಲ್ಲಂಘನೆ ಆರೋಪಕ್ಕೆ ಶುಗರ್ ಫ್ಯಾಕ್ಟರಿ ಗುರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನಿಷ್ಟೂರ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ಸಮೀಪದ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶುಗರ್ ಫ್ಯಾಕ್ಟರಿ ಮತ್ತು ಏಥೆನಾಲ್ ಘಟಕದ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಇದೆ. ಜೊತೆಗೆ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನಲೆ ಫ್ಯಾಕ್ಟರಿಗೆ ನೀಡಿರುವ ವಿದ್ಯುತ್, ನೀರಿನ ಸಂರ್ಪಕ ಕಡಿತಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ ಎನ್ನಲಾಗಿದೆ.
























































