ನವದೆಹಲಿ: ದೆಹಲಿಯ ಆಮ್ ಆದ್ಮಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಾಂಬ್ ಸಿಡಿಸಿದ್ದಾರೆ. ತಮ್ಮ ಪಕ್ಷದ 7 ಶಾಸಕರಿಗೆ ತಲಾ 25 ಕೋಟಿ ರೂ. ಆಮಿಷ ಒಡ್ಡಲಾಗಿದೆ ಎಂದವರು ಆರೋಪಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅರವಿಂದ್ ಕೇಜ್ರಿವಾಲ್, ನಮ್ಮ ಏಳು ಶಾಸಕರನ್ನು ಬಿಜೆಪಿಗರು ಸಂಪರ್ಕಿಸಿ, ಕೆಲವು ದಿನಗಳ ಬಳಿಕ ನಾವು ಕೇಜ್ರಿವಾಲ್ ಅವರನ್ನು ಬಂಧಿಸುತ್ತೇವೆ. ನಂತರ ನಿಮ್ಮ ಶಾಸಕರನ್ನು ಒಡೆಯುತ್ತೇವೆ ಎಂಬ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ. 21 ಶಾಸಕರೊಂದಿಗೆ ಮಾತುಕತೆಯೂ ಸಹ ನಡೆಸಲಾಗಿದೆ. ಜೊತೆಗೆ 25 ಕೋಟಿ ರೂ. ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.


























































