ಪಾಟ್ನಾ: ಆರ್ಜೆಡಿ ಜೊತೆಗಿನ ಮಹಾಮೈತ್ರಿ ಮುರಿದು ಬಿದ್ದ ನಂತರ ಇಂಡಿಯಾ ಮೈತ್ರಿ ಕೂಟದಿಂದ ದೂರ ಸರಿದ ಜೆಡಿಯು ಇದೀಗ ಎನ್ಡಿಎ ಗರಡಿ ಸೇರಿದೆ.
ಹಠಾತ್ ಬೆಳವಣಿಗೆಗೆ ಸಾಕ್ಷಿಯಾದ ಬಿಹಾರದಲ್ಲಿ RJD-JDU ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.
ನೂತನ ಎನ್ಡಿಎ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಸಂಜೆ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿನಿತೀಶ್ ಕುಮಾರ್ ಜೊತೆಗೆ ಜೆಡಿಯು ನಾಯಕರಾದ ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್ ಮತ್ತು ಬಿಜೆಪಿ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣ ವಚನ ಬೋಧಿಸಿದರು. ಆ ಮೂಲಕ ನಿತೀಶ್ ಕುಮಾರ್ 9ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.


























































