ಬೆಂಗಳೂರು: ಭ್ರ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಇಂದು ಮತ್ತೆ ಅಖಾಡಕ್ಕೆ ಧುಮುಕಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಪೊಲೀಸರು ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದರು. ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಬೆಳಿಗ್ಗೆಯಿಂದಲೇ ಈ ಕಾರ್ಯಾಚರಣೆ ನಡೆದಿದೆ. ಅಧಿಕಾರಿಗಳ ವಿರುದ್ದದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಕುರಿತ ದೂರುಗಳ ಹಿನ್ನೆಲೆ ಈ ಕಾರ್ಯಾಚರಣೆ ನಡೆದಿದೆ.