ಬೆಂಗಳೂರು: ಭ್ರ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಇಂದು ಮತ್ತೆ ಅಖಾಡಕ್ಕೆ ಧುಮುಕಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಕುರಿತ ದೂರುಗಳ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಪೊಲೀಸರು ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದರು. ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಬೆಳಿಗ್ಗೆಯಿಂದಲೇ ಈ ಕಾರ್ಯಾಚರಣೆ ನಡೆದಿದೆ.
ಮಂಡ್ಯ ಜಿಲ್ಲೆಯ ವಿವಿಧೆಡೆ ಲೋಕೋಪಯೋಗಿ ಇಲಾಖೆ ಅಧಿಕಾರಿ ಹರ್ಷ ಎಂಬವರ ಹಾಗೂ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಪೊಲೀಸ್ಮಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆನ್ನಲಾಗಿದೆ.
ತುಮಕೂರಿನಲ್ಲಿ KRDL ಇಂಜಿನಿಯರ್ ಹನುಮಂತರಾಯಪ್ಪ ಅವರ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ.
ಇದೇ ವೇಳೆ, ಮೈಸೂರಿನ ಹಲವೆಡೆ ಮುಡಾ ಇಂಜಿನಿಯರ್ ಯಜ್ಞೇಂದ್ರ ಅವರಿಗೆ ಹಾಗೂ ಆಪ್ತರಿಗೆ ಸೇರಿದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಆಸ್ತಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಹಾಸನದಲ್ಲಿ ಹೆಲ್ತ್ ಇನ್ಸ್ಪೆಕ್ಟರ್ ಜಗನ್ನಾಥ್ ನಿವಾಸದ ಮೇಲೆ ಹಾಗೂ ಅವರ ಸಹೋದರ ಕಿರಣ್ ಅವರ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಅವರ ಕಡೂರು ಸೇರಿದಂತೆ ಹಲವೆಡೆ ಮನೆ ಕಚೇರಿಗಳ ಮೇಲೆ ದಾಳಿ ನಡೆದಿದೆ.