ನವದೆಹಲಿ: ಕೇಂದ್ರ ಸರ್ಕಾರದ 2024-25 ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೃಷಿ ಕ್ಷೇತ್ರಕ್ಕೆ ಅತೀ ಕಡಿಮೆ ಅನುದಾನ ನೀಡಿದ್ದಾರೆ ಎಂಬ ವಿಶ್ಲೇಷಣೆ ಕೇಳಿಬಂದಿದೆ.
ಕೊಯ್ಲಿನ ನಂತರದ ಕೃಷಿ ಚಟುವಟಿಕೆಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಹೂಡಿಕೆಗಳನ್ನು ಉತ್ತೇಜಿಸುವುದಾಗಿ ಈ ಬಜೆಟ್ ಭಾಷಣದಲ್ಲಿ ಭರವಸೆ ನೀಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪಿಎಂ ಕಿಸಾನ್ ಯೋಜನೆಯಡಿಯಲ್ಲಿ 11.8 ಕೋಟಿ ರೈತರಿಗೆ ನೆರವು ಸಿಕ್ಕಿದೆ ಎಂದು ಹೇಳಿದ್ದಾರೆ. ಆದರೆ ಪಿಎಂ ಕಿಸಾನ್ ಯೋಜನೆಯ ಮೊತ್ತ ವಿಚಾರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಆರ್ಥಿಕ ತಜ್ಞರ ಪ್ರತಿಕ್ರಿಯಿಸಿದ್ದಾರೆ.




























































