ಬೆಂಗಳೂರು: ಕೇಂದ್ರ ಬಜೆಟ್’ನಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರದಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದಿರುವ ಅವರು, ನಮ್ಮ ರಾಜ್ಯಗಳ ಹಣ ನಮಗೇ ಹಂಚಿಕೆಯಾಗಬೇಕಾದರೆ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯವಾಗಿದೆ ಎಂದಿದ್ದಾರೆ.
ದಕ್ಷಿಣ ಭಾರತದ ತೆರಿಗೆ ಹಣವನ್ನು ದಕ್ಷಿಣ ಭಾರತಕ್ಕೇ ಖರ್ಚು ಮಾಡಬೇಕು. ನಮ್ಮ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡಬಾರದು ಎಂದು ಪ್ರತಿಪಾದಿಸಿರುವ ಡಿ.ಕೆ.ಸುರೇಶ್, ಪ್ರತ್ಯೇಕ ರಾಷ್ಟ್ರದ ಕೂಗು ಏಳುವ ಮುನ್ನವೇ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು ಎಂದಿದ್ದಾರೆ.




























































