ಭೂಪಾಲ್: ಮಧ್ಯಪ್ರದೇಶದ ಹರ್ದಾ ಪಟ್ಟಣದಲ್ಲಿ ಮಂಗಳವಾರ ಸಂಭವಿಸಿದ ಪಟಾಕಿ ಕಾರ್ಖಾನೆ ಸ್ಫೋಟ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 170 ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಹರ್ದಾ ಪಟ್ಟಣದ ಹೊರವಲಯದಲ್ಲಿರುವ ಮಗರ್ಧ ರಸ್ತೆಯಲ್ಲಿರುವ ಬೈರಾಗರ್ ಪ್ರದೇಶದಲ್ಲಿ ಈ ಘಟನೆ ಸಂಬಂಧಿಸಿಸಿದ್ದು ಪ್ರಕರಣ ದಾಖಲಿಸಿರುವ ಪೊಲೀಸರು ಕಾರ್ಖಾನೆ ಮಾಲೀಕ ರಾಜೇಶ್ ಅಗರವಾಲ್ ಮತ್ತು ಸೋಮೇಶ್ ಅಗರವಾಲ್ ಎಂಬವರನ್ನು ಮಾಂಧಿಸಿದ್ದು, ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.






















































