ಬಲೂಚಿಸ್ತಾನ್: ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಪಾತಕಿಗಳು ಅಟ್ಟಹಾಸ ಮೆರೆದಿದ್ದಾರೆ. ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಬಾಂಬ್ ಸ್ಫೋಟದಲ್ಲಿ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಲೂಚಿಸ್ತಾನದಲ್ಲಿ ಸಂಭವಿಸದ ಈ ವಿಧ್ವಂಸದಲ್ಲಿ ಸುಮಾರು 40 ಮಂದಿ ಗಾಯಗೊಂಡಿದ್ದಾರೆ.
ಬಲೂಚಿಸ್ತಾನದ ಪಿಶಿನ್ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯ ಕಚೇರಿ ಬಳಿ ಸ್ಫೋಟ ಸಂಭವಿಸಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ವಿವರಿಸಿದೆ.




























































