ವಿಜಯವಾಡ: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಎರಡು ಟ್ರಕ್‌ಗಳು ಮತ್ತು ಖಾಸಗಿ ಬಸ್‌ಗಳ ನಡುವೆ ಭೀಕರ ಡಿಕ್ಕಿ ಸಂಭವಿಸಿ, ಆರು ಮಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ 15 ಮಂದಿ ಗಾಯಗೊಂಡಿದ್ದಾರೆ.
ಶನಿವಾರ ಮುಂಜಾನೆ ಕವಲಿ-ಮುಸುನೂರು ಟೋಲ್ ಪ್ಲಾಜಾ ಬಳಿ ಟ್ರಕ್ ಒಂದಕ್ಕೆ ಮತ್ತೊಂದು ವಾಹನ ಡಿಕ್ಕಿ ಹೊಡೆದಿದೆ. ಅದೇ ಹೊತ್ತಿಗೆ ಟ್ರಕ್ ಪಕ್ಕದ ಲೇನ್‌ನಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದ ಪರಿಣಾಮವು ಹೆದ್ದಾರಿಯುದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಯಿತು. ನೆಲ್ಲೂರಿನಿಂದ ವಿಜಯವಾಡಕ್ಕೆ ಹೋಗುವ ವಾಹನಗಳು ಎರಡು ಕಿಲೋಮೀಟರ್ ಉದ್ದದ ಗ್ರಿಡ್‌ಲಾಕ್‌ನಲ್ಲಿ ಸಿಕ್ಕಿಹಾಕಿಕೊಂಡವು.


























































