ಬೆಂಗಳೂರು: ರಾಜ್ಯಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಒಂದು ದಿನ ಇರುವಾಗಷ್ಟೇ ಕಾಂಗ್ರೆಸ್ ಪಕ್ಷ ತನ್ನಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕದಿಂದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸುಲಭ ಸಾಧ್ಯವಿದ್ದು, ಇಬ್ಬರು ಹಾಲಿ ಸಂಸದರಿಗೆ ಹೈಕಮಾಂಡ್ ಟಿಕೆಟ್ ಪ್ರಕಟಿಸಿದೆ.
ಹಾಲಿ ರಾಜ್ಯಸಭಾ ಸದಸ್ಯರಾಗಿರುವ ಜಿ.ಸಿ.ಚಂದ್ರಶೇಖರ್ ಮತ್ತು ನಾಸೀರ್ ಹುಸೇನ್ ಅವರಿಗೆ ಮತ್ತೊಮ್ಮೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇವರ ಜೊತೆಯಲ್ಲೇ ಎಐಸಿಸಿ ಖಜಾಂಚಿಯಾಗಿರುವ ದೆಹಲಿ ಮೂಲದ ಅಜಯ್ ಮಕೆನ್ ಅವರಿಗೆ ಕರ್ನಾಟಕದಿಂದ ಆಯ್ಕೆ ಮಾಡಲು ನಿರ್ಧರಿಸಿರುವ ಕಾಂಗ್ರೆಸ್ ಹೈಕಮಾಂಡ್ ಈ ಬಾರಿಯ ರಾಜ್ಯಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಕುತೂಹಲದ ಹೆಜ್ಜೆ ಇಟ್ಟಿದೆ.




























































