ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಬಣ್ಣದ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿಯ ಅಲಿಪುರದ ಬಣ್ಣದ ಕಾರ್ಖಾನೆಯೊಂದರಲ್ಲಿ ಗುರುವಾರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು.
ಅಲಿಪುರದ ದಯಾಲ್‌ಪುರ ಮಾರುಕಟ್ಟೆಯಲ್ಲಿರುವ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿಕೊಂಡು ಭೀಕರತೆಗೆ ಸಾಕ್ಷಿಯಾಯಿತು. ಅಗ್ನಿ ಶಾಮಕ ದಳವು ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ಕೈಗೊಂಡರೂ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಅಗ್ನಿಯ ಭೀಕರತೆ ಎಷ್ಟಿತ್ತೆಂದರೆ, ಸುಮಾರು 22 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು. ರಾತ್ರಿ 9 ಗಂಟೆಯವರೆಗೂ ಅಗ್ನಿಶಾಮನಾ ಕಾರ್ಯಾಚರಣೆ ನಡೆದಿದೆ.




























































