ನವದೆಹಲಿ: ದೆಹಲಿಯಾಯ್ಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಿಂದಾಗಿ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸುಳ್ಳು ಸಂಗತಿ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಸ್ಪಷ್ಟಪಡಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ, ಪ್ರಶ್ನೆಯಲ್ಲಿರುವ ಪತ್ರವು ನಕಲಿ ಎಂದು ಸ್ಪಷ್ಟಪಡಿಸಿರುವ CBSE, 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ ಎಂದಿದೆ.

















































