ಚನ್ನಪಟ್ಟಣ: ರಾಮನಗರ ಜಿಲ್ಲೆ ಚನ್ನಪಟ್ಟಣ ಬಳಿ ಭೀಕರ ಅಪಘಾತ ಮೂವರನ್ನು ಬಲಿತೆಗೆದುಕೊಂಡಿದೆ. ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ 6 ಜನ ಗಾಯಗೊಂಡಿದ್ದಾರೆ.
ಚನ್ನಪಟ್ಟಣದ ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಶನಿವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎನ್ನಲಾಗಿದೆ.



















































