ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿ ದಿಶೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ರಾಜ್ಯಸರ್ಕಾರ, ಬೆಳಗಾವಿಯಲ್ಲಿ ಸುಸಜ್ಜಿತ ಸಾರಿಗೆ ಬಸ್ ನಿಲ್ದಾಣ ಲೋಕಾರ್ಪಣೆ ಮಾಡುವ ಮೂಲಕ ಪ್ರಗತಿಯ ವೇಗವನ್ನು ಹೆಚ್ಚಿಸಿದೆ. ಜೊತೆಗೆ ಬಸ್ಸುಗಳನ್ನೂ ಸೇವೆಗೆ ಸಮರ್ಪಿಸಲಾಯಿತು. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಏರ್ಪಾಡಾದ ಸಮಾರಂಭ ಗಮನಸೆಳೆಯಿತು.
ನೂತನ ಬಸ್ಸುಗಳ ಲೋಕಾರ್ಪಣೆ ಹಾಗೂ ಹಾರೂಗೇರಿ ನೂತನ ಬಸ್ ನಿಲ್ದಾಣದ ಉದ್ಘಾಟನೆ ಜೊತೆಗೆ ಸಾರಿಗೆ ಸಂಸ್ಥೆಯಲ್ಲಿ ಅಪಘಾತರಹಿತ ಕರ್ತವ್ಯ ನಿರ್ವಹಿಸಿರುವ 38 ಚಾಲಕರಿಗೆ ಬೆಳ್ಳಿಪದಕ ವಿತರಣೆ ಮಾಡಲಾಯಿತು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಅವರು ಹೊಸ ಬಸ್ಸುಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದರು.
ಇದನ್ನೂ ಓದಿ.. ಸಾವಿನ ದವಡೆಯಿಂದ ಪಾರಾದ ನಟಿ..
ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ರಾಜ್ಯದ ಸಾರಿಗೆ ನಿಗಮಗಳಿಗೆ ನೂತನ ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು, 2 ಸಾವಿರಕ್ಕಿಂತಲೂ ಅಧಿಕ ವಾಹನ ಚಾಲಕರ ಹಾಗೂ ನಿರ್ವಾಹಕರ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೂಡ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಪ್ರಸ್ತುತ ಬಹುತೇಕ ಕಡೆ ಬಸ್ ನಿಲ್ದಾಣಗಳ ಕೊರತೆ ಇಲ್ಲ. ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನ ಮತ್ತು ಹಿರಿಯ ನಾಗರಿಕ ಸಬಲಿಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ, ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ವಾಕರಸಾ ಸಂಸ್ಥೆ ಅಧ್ಯಕ್ಷ ಭರಮನಗೌಡ (ರಾಜು) ಕಾಗೆ, ಶಾಸಕರಾದ ಆಸೀಫ್ (ರಾಜು) ಸೇಠ, ಚನ್ನರಾಜ ಹಟ್ಟಿಹೊಳಿ, ಬಾಬಾಸಾಹೇಬ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಎಸ್.ಗುಳೇದ, ವಾ.ಕ.ರ.ಸಾ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಸ್. ಭರತ್ ಸೆರೆಯಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.