ಮುಂಬೈ: ಮರಾಠರಿಗೆ ಹೆಚ್ಚುವರಿ ಶೇಕಡಾ 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿದೆ.
ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಶೇಕಡಾ 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಇದಾಗಿದೆ.
ಮಹಾರಾಷ್ಟ್ರ ಸರ್ಕಾರ ಮಂಗಳವಾರ ಈ ಮಸೂದೆಯನ್ನು ಮಂಡಿಸಿ ಅಂಗೀಕರಿಸಿದ್ದು, ಇದರಂತೆ ಶೇ. 50 ಮೀಸಲಾತಿ ಮಿತಿಯನ್ನು ಮೀರಿ ಮರಾಠರಿಗೆ ಮೀಸಲಾತಿ ನೀಡಿದೆ. ಅಂದರೆ ಈ ಮೀಸಲಾತಿಯನ್ನು ಶೇಕಡಾ 10 ರಷ್ಟು ವಿಸ್ತರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಅವಕಾಶ ಸಿಕ್ಕಿದಂತಾಗಿದೆ.