ಬೆಂಗಳೂರು: ದೇವಸ್ಥಾನಗಳ ಹಣವನ್ನು ಸಿದ್ದರಾಮಯ್ಯ ಸರ್ಕಾರದಿಂದ ಅನ್ಯಧರ್ಮಗಳಿಗೆ ಹಂಚಲಾಗುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಆಂದೋಲನವನ್ನೇ ಆರಂಭಿಸಿದೆ. ಈ ಕುರಿತಂತೆ ಬಗೆ ಬಗೆಯಲ್ಲಿ ಟ್ವೀಟ್ ಮಾಡುತ್ತಿರುವ ಬಿಜೆಪಿ ತೀಕ್ಷ್ಣ ಪದಗಳಿಂದ ಸಿದ್ದರಾಮಯ್ಯ ಸರ್ಕಾರವನ್ನು ಖಂಡಿಸಿದೆ.
‘ಅಂದು ಘಜ್ನಿ ದೇವಸ್ಥಾನಗಳನ್ನು ನಿರಂತರವಾಗಿ ಲೂಟಿ ಮಾಡಿದ್ದ. ಇಂದು ಸಿದ್ದರಾಮಯ್ಯ ಸರ್ಕಾರ ದೇವಾಲಯಗಳ ಲೂಟಿಗಿಳಿದು ತಮ್ಮ ಕುರ್ಚಿಯನ್ನು ಭದ್ರ ಮಾಡಿಕೊಳ್ಳಲು ನೋಡುತ್ತಿದೆ. ಭಕ್ತರ ಕಾಣಿಕೆ ಹುಂಡಿಗೆ ಕನ್ನ ಹಾಕಿದ ಕಾಂಗ್ರೆಸ್ ಸರ್ಕಾರ ಶಾಪಗ್ರಸ್ಥವಾಗುವುದು ನಿಶ್ಚಿತ!’ ಎಂದು ಪೋಸ್ಟ್ ಹಾಕಿದೆ.
ಅಂದು ಘಜ್ನಿ ದೇವಸ್ಥಾನಗಳನ್ನು ನಿರಂತರವಾಗಿ ಲೂಟಿ ಮಾಡಿದ್ದ.
ಇಂದು @siddaramaiah ಸರ್ಕಾರ ದೇವಾಲಯಗಳ ಲೂಟಿಗಿಳಿದು ತಮ್ಮ ಕುರ್ಚಿಯನ್ನು ಭದ್ರ ಮಾಡಿಕೊಳ್ಳಲು ನೋಡುತ್ತಿದೆ.
ಭಕ್ತರ ಕಾಣಿಕೆ ಹುಂಡಿಗೆ ಕನ್ನ ಹಾಕಿದ @INCKarnataka ಸರ್ಕಾರ ಶಾಪಗ್ರಸ್ಥವಾಗುವುದು ನಿಶ್ಚಿತ!#OurTempleOurRight #HinduVirodhiCongress pic.twitter.com/4Jp05S3zxS
— BJP Karnataka (@BJP4Karnataka) February 22, 2024
ಇದೇ ವೇಳೆ, ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ಸರ್ಕಾರ, ಶ್ರೀಮಂತ ದೇವಾಲಯಕ್ಕೂ ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಅಧ್ಯಕ್ಷ ಬಿ.ವೈ.ವಿಜಯೇಂದ್ರ, ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಡಿ. ‘ಸರ್ಕಾರ ನಡೆಸಲು ನಮ್ಮ ಕೈಯಲ್ಲಿ ಆಗುತ್ತಿಲ್ಲ; ಹಣಕಾಸಿನ ತೊಂದರೆ ಇದೆ’ ಎಂದು ತಿಳಿಸಿ ಎಂದು ಟೀಕಿಸಿದ್ದಾರೆ.
ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ಸರ್ಕಾರ, ಶ್ರೀಮಂತ ದೇವಾಲಯಕ್ಕೂ ಕನ್ನ ಹಾಕುವ ಕೆಲಸ ಮಾಡುತ್ತಿದೆ. ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಡಿ. ‘ಸರ್ಕಾರ ನಡೆಸಲು ನಮ್ಮ ಕೈಯಲ್ಲಿ ಆಗುತ್ತಿಲ್ಲ; ಹಣಕಾಸಿನ ತೊಂದರೆ ಇದೆ’ ಎಂದು ತಿಳಿಸಿ.
– ಶ್ರೀ @BYVijayendra, ರಾಜ್ಯಾಧ್ಯಕ್ಷರು… pic.twitter.com/wcR8UadOK1
— BJP Karnataka (@BJP4Karnataka) February 22, 2024




























































