ಮುಂಬೈ: ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನೆಯ (ಯುಬಿಟಿ) ಪ್ರಮುಖ ನಾಯಕ ಮನೋಹರ್ ಜಿ. ಜೋಶಿ ಅವರು ಶುಕ್ರವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
86 ವರ್ಷ ವಯಸ್ಸಿನ ಜೋಶಿ ಅವರು ಕೆಲ ಸಮಯದಿಂದ ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಗುರುವಾರ ತಡರಾತ್ರಿ ಹೃದಯಾಘಾತಕ್ಕೊಳಗಾದ ಜೋಶಿ ಅವರನ್ನು ಮಾಹಿಮ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೋಶಿ ಅವರು ಚಿಕಿತ್ಸೆಫಲಕಾರಿಯಾಗದೆ ನಸುಕಿನ ಜಾವ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿವೆ.



















































