ನವದೆಹಲಿ: 2024ರ ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಚುನಾವಣೆಯ ವೇಳಾಪಟ್ಟಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶ ಗೊಂದಲ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಂಬಂಧಿಸಿದಂತೆ ವಾಟ್ಸಾಪ್‌ನಲ್ಲಿ ಸುಳ್ಳು ಸಂದೇಶ ಹರಡಲಾಗುತ್ತಿದೆ. ಈ ಸಂದೇಶವು ನಕಲಿ ಎಂದಿದೆ. ಚುನಾವಣಾ ಆಯೋಗವು ಈವರೆಗೂ ಯಾವುದೇ ದಿನಾಂಕ ಪ್ರಕಟಿಸಿಲ್ಲ. ಆಯೋಗವು ಸುದ್ದಿಗೋಷ್ಠಿ ಮೂಲಕ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುತ್ತದೆ ಎಂದು ಆಯೋಗವು ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸ್ಪಷ್ಟನೆ ನೀಡಿದೆ.
A fake message is being shared on Whats app regarding schedule for #LokSabhaElections2024#FactCheck: The message is #Fake. No dates have been announced so far by #ECI.
Election Schedule is announced by the Commission through a press conference. #VerifyBeforeYouAmplify pic.twitter.com/KYFcBmaozE
— Election Commission of India (@ECISVEEP) February 24, 2024





















































