ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದ ‘ಗಾಜಿನ ಮನೆ’ಯಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರು ನವೆಂಬರ್ 2011 ರಲ್ಲಿ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್‌ಕೆ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಅವರು ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಹಾಜರಿದ್ದು, ಶುಭ ಹಾರೈಸಿದೆ.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ… pic.twitter.com/ADLkOpIdCp
— Siddaramaiah (@siddaramaiah) February 25, 2024