ದಾವಣಗೆರೆ: ದಾವಣಗೆರೆ ಹೊರವಲಯದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೃತಪಟ್ಟವರೆಲ್ಲರೂ ಆಂಧ್ರ ಮೂಲದವರೆಂದು ಹೇಳಲಾಗುತ್ತಿದೆ.