ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ KSRTCಯಲ್ಲಿ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ. ಅರ್ಹ ಅಭ್ಯರ್ಥಿಗಳಿ ಆಯ್ಕೆ ಸಂಬಂಧ ಪ್ರಕ್ರಿಯೆ ನಡೆದಿದೆ.
ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ: 14-02-2020 ರನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇರ ನೇಮಕಾತಿಗಾಗಿ ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿನ ಹುದ್ದೆಗಳ ಸಂಖ್ಯೆಯನ್ನು ಸರ್ಕಾರದ ಆದೇಶದಂತೆ 2000ಕ್ಕೆ ಸೀಮಿತಗೊಳಿಸಿ ಭರ್ತಿ ಮಾಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಅದರಂತೆ ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳನ್ವಯ ವರ್ಗವಾರು ಹುದ್ದೆಗಳ ಸಂಖ್ಯೆಯನ್ನು ಪರಿಷ್ಕರಿಸಿ ನಿಗಮದ ಅಧಿಕೃತ ವೆಬ್ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ 06-03-2024ರಿಂದ ದಾಖಲಾತಿ/ದೇಹದಾರ್ಢ್ಯತೆ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಅಭ್ಯರ್ಥಿಗಳು 03-03-2024 ರಿಂದ ನಿಗಮದ ಅಧಿಕೃತ ವೆಬ್‌ಸೈಟ್ ksrtcjobs.karnataka.gov.in ರಲ್ಲಿ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಈ ನಿಗಮದ ಪ್ರಕಟಣೆ ತಿಳಿಸಿದೆ..
ಪ್ರಸ್ತುತ ಅಭ್ಯರ್ಥಿಗಳ ಮೂಲ ದಾಖಲಾತಿ / ದೇಹದಾರ್ಢ್ಯತೆ ಪರಿಶೀಲನೆ ಮಾತ್ರ ನಡೆಸಲಾಗುತ್ತಿದೆ. ಅರ್ಹರಾದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ ನಡೆಸುವ ಕುರಿತು ಪ್ರತ್ಯೇಕ ದಿನಾಂಕ / ಸ್ಥಳವನ್ನು ನಿಗಧಿಪಡಿಸಲಾಗುವುದು. ಹುದ್ದೆಯ ಆಯ್ಕೆಯು ಗಣಕೀಕೃತ ಚಾಲನಾ ವೃತ್ತಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಹಾಗೂ ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳಿಗೆ ಅನುಗುಣವಾಗಿ ಪಾರದರ್ಶಕವಾಗಿ ನಡೆಯುವುದರಿಂದ ಯಾರ ಹಸ್ತಕ್ಷೇಪಕ್ಕೂ ಅವಕಾಶ ಇಲ್ಲ. ಹಾಗಾಗಿ ಅಭ್ಯರ್ಥಿಗಳು ಯಾವುದೇ ಶಿಫಾರಸ್ಸು, ಮಧ್ಯವರ್ತಿಗಳ ಅಮಿಷಗಳಿಗೆ ಒಳಗಾಗಬಾರದೆಂದು ಕೆಎಸ್ಸಾರ್ಟಿಸಿ.
ನಿರ್ದೇಶಕರು (ಸಿ & ಜಾ) ಹಾಗೂ ಆಯ್ಕೆ ಸಮಿತಿ ಅಧ್ಯಕ್ಷರು ಸಲಹೆ ಮಾಡಿದ್ದಾರೆ.