ಬೆಂಗಳೂರು: ನಟ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಮ್ ವಿಧಿವಶರಾಗಿದ್ದಾರೆ. ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು, ಅಧಿಕಾರಿಯಾಗಿದ್ದ ನಟ ಕೆ.ಶಿವರಾಮ್ ಅವರು ಗುರುವಾರ ಮೃತಪಟ್ಟಿದ್ದಾರೆ.
ಬುಧವಾರ ಹೃದಯಾಘಾತವಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
1985ರಲ್ಲಿ ಕೆಎಎಸ್ ಅಧಿಕಾರಿಯಾಗಿದ್ದ ಕೆ.ಶಿವರಾಮ್ ಬಳಿಕ, ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಕನ್ನಡಿಗರಿಗೆ ಸ್ಫೂರ್ತಿಯಾಗಿದ್ದರು. ಜೊತೆಗೆ ಹಲವಾರು ಕನ್ನಡ ಚಿತ್ರಗಳಲ್ಲೂ ನಟಿಸಿ ಮನೆಮಾತಾಗಿದ್ದರು. ನಿವೃತ್ತಿ ನಂತರ ರಾಜಕೀಯ ಪಕ್ಷಗಳ ಜೊತೆ ಸಕ್ರಿಯರಾಗಿದ್ದ ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.
ಕೆ.ಶಿವರಾಮ್ ಅವರ ನಿಧನಕ್ಕೆ ರಾಜಕೀಯ ನಾಯಕರು, ಚಲನಚಿತ್ರ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ,