ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣ ಬಗ್ಗೆ ರಾಜ್ಯ ಸರ್ಕಾರ ಮೃದು ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ, ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಬೇಕೆಂದು ಆಗ್ರಹಿಸಿದೆ.
ತುಮಕೂರು ಜಿಲ್ಲೆ ಕುಣಿಗಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸರ್ಕಾರದ ವೂರುದ್ದ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಬಿಜೆಪಿ ಇಂತಹ ಘಟನೆಗಳನ್ನು ರಾಜಕೀಯಗೊಳಿಸುವುದರಿಂದ ದೂರವಿರುತ್ತದೆ ಎಂದು ಪ್ರತಿಪಾದಿಸಿದ ವಿಜಯೇಂದ್ರ, ಸ್ಫೋಟ ಘಟನೆಯನ್ನು ಉದ್ಯಮ ವೈಷಮ್ಯದ ಕೃತ್ಯ ಎಂದು ಉಪಮುಖ್ಯಮತ್ರಿ ಹೇಳಿದ್ದಾರೆ ಎಂದು ಟೀಕಿಸಿದರು.


























































