ಬೆಂಗಳೂರು: ಲಾಭದತ್ತ ಮುಖಮಾಡಿರುವ ಬೆಂಗಳೂರು ಮಹಾನಗರ ಸರಿಗೆ ಸಂಸ್ಥೆ (ಬಿಎಂಟಿಸಿ) ಯ ನೌಕರರ ಸೈನ್ಯ ಬಲಗೊಳಿಸುವ ಪ್ರಕ್ರಿಯೆಗೆ ವೇಗ ಸಿಕ್ಕಿದೆ. BMTCಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮತ್ತು ಅನುಕಂಪದ ಆಧಾರದಡಿಯಲ್ಲಿ ಸೂಕ್ತ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗಿದೆ. .
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಶನಿವಾರ (02.03.2024) ರಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ಸಚಿವರು ನೆರೆದಿದ್ದ ಅಭ್ಯರ್ಥಿಗಳು ಮತ್ತು ಕುಟುಂಬದವರಿಗೆ ಶುಭ ಹಾರೈಸಿ ಸೇವೆಗೆ ನಿಯುಕ್ತಿಗೊಳಿಸಿದ ಸನ್ನಿವೇಶ ಗಮನಸೆಳೆಯಿತು.
ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಭಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಸುಮಾರು 200 ಮಂದಿಯನ್ನು ಕಳೆದ ಅಕ್ಟೋಬರ್ ಮತ್ತು ನವೆಂಬರ್-2023ರಲ್ಲಿ ದರ್ಜೆ-3 (ಮೇಲ್ವಿಚಾರಕೇತರ) ಮತ್ತು ದರ್ಜೆ-4ರ ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಜೊತೆಗೆ, ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಮೃತಾವಲಂಭಿತರುಗಳನ್ನು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿ ಕಿರಿಯ ಸಹಾಯಕ ಕಂ ಡೇಟಾ ಎಂಟ್ರಿ ಆಪರೇಟರ್, ದರ್ಜೆ-3 (ಮೇಲ್ವಿಚಾರಕೇತರ) ಹುದ್ದೆಗೆ 50 ಮಂದಿಯನ್ನು ನೇಮಕ ಮಾಡಲಾಗಿದ್ದು, ನೇಮಕಾತಿ ಪತ್ರವನ್ನು ವಿತರಿಸಲಾಗಿದೆ ಎಂದು ಸಾರಿಗೆ ಸಚಿಔರಾಮಲಿಂಗ ರೆಡ್ಡಿ ತಿಳಿಸಿದರು.
BMTC 2500 ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ; ಅರ್ಜಿ ಆಹ್ವಾನ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗೊಳಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ‘ನಿರ್ವಾಹಕ ಹುದ್ದೆಗೆ 10.03.2024 ರಿಂದ 10.04.2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ – https://kea.kar.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಸೂಚಿಸಿರುವ ವಿದ್ಯಾರ್ಹತೆ, ದೈಹಿಕ ದೃಢತೆ, ಷರತ್ತು ಮತ್ತು ಸೂಚನೆಗಳನ್ನು ಸ್ಪಷ್ಟವಾಗಿ ಓದಿ, ಅರ್ಥೈಸಿಕೊಂಡು ಅರ್ಹತೆ ಹೊಂದಿದ ಪಕ್ಷದಲ್ಲಿ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.
ಬೆಂ.ಮ.ಸಾ.ಸಂಸ್ಥೆಯಯ ವ್ಯವಸ್ಥಾಪಕ ನಿರ್ದೇಶ ಕರಾಮಚಂದ್ರನ್.ಆರ್, ಮಾಹಿತಿ ತಂತ್ರಜ್ಞಾನದ ನಿರ್ದೇಶಕರು ಶಿಲ್ಪ.ಎಂ, ಸಹಿತ ಹಿರಿಯ ಅಧಿಜಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.