ಬೆಂಗಳೂರು; ಕರ್ನಾಟಕದಲ್ಲಿನ 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿವಾದಕ್ಕೆ ಮತ್ತೆ ಹಠಾತ್ ತಿರುವು ಸಿಕ್ಕಿದೆ. ಈ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕಳೆದ ಬುಧವಾರವಷ್ಟೇ ಬೋರ್ಡ್ ಪರೀಕ್ಷೆಗಯನ್ನು ಹೈಕೋರ್ಟ್ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ಪ್ರಕಟಿಸಿ, ಬೋರ್ಡ್ ಪರೀಕ್ಷೆಗಳಿಗೆ ಅನುಮತಿ ನೀಡಿದೆ.
ಖಾಸಗಿ ಶಾಲೆಗಳಿಂದಷ್ಟೇ ಬೋರ್ಡ್ ಪರೀಕ್ಷೆಗೆ ತಕರಾರಿದೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ ಎಂದು ಹೈಕೋರ್ಟ್‌ನ ವಿಭಾಗಿಯ ಪೀಠದ ಮುಂದೆ ವಾದ ಮಂಡಿಸಿದೆ. ಬೋರ್ಡ್ ಪರೀಕ್ಷೆಯಿಂದ ಖಾಸಗಿ ಶಾಲೆಗಳ ಮೌಲ್ಯಮಾಪನವಾಗಲಿದೆ ಎಂದೂ ಸರ್ಕಾರ ಅಭಿಪ್ರಾಯ ಪಟ್ಟಿದೆ. ವಾದವನ್ನು ಆಲಿಸಿದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿತ್ತು.
ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಪರವಾಗಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿದ್ದು, ವಾದವನ್ನು ಆಲಿಸಿದ ನ್ಯಾಯಪೀಠ ಕರ್ನಾಟಕದಲ್ಲಿನ 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ತಡಯಾಜ್ಞೆ ನೀಡಿದೆ.






















































