ಚಂಡೀಗಢ: ಹರಿಯಾಣ ರಾಜ್ಯದ ನೂತನ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದೆ.
ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮಂಗಳವಾರ ಹರಿಯಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಸೈನಿ ಅವರು ಮರುದಿನವೇ ವಿಶ್ವಾಸಮತ ಗೆದ್ದಿದ್ದಾರೆ. ವಿಧಾನಸಭೆಯಲ್ಲಿ ವಿಶ್ವಾಸಮತ ಕೋರಿ ಪ್ರಸ್ತಾವನೆ ಮಂಡಿಸಿದರು. ಸದನದಲ್ಲಿ ಬಹುಮತ ಸಾಬೀತು ಮಾಡುವ ಮೂಲಕ ಎಲ್ಲಾ ರೀತಿಯ ರಾಜಕೀಯ ಕುತೂಲಗಳಿಗೆ ಅವರು ತೆರೆ ಎಳೆದರು.




























































