ನವದೆಹಲಿ: ಲೋಕಸಭೆ ಚುನಾವಣ ದಿನಾಂಕವನ್ನು ನಾಳೆ ಘೋಷಿಸುವ ಸಾಧ್ಯತೆಗಳಿವೆ. ಮಾ.16ರಂದು ದಿನಾಂಕ ಘೋಷಿಸುವ ಸಾಧ್ಯತೆಗಳ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸುಳಿವು ನೀಡಿದೆ.
ಶುಕ್ರವಾರ ನೂತನ ಚುನಾವಣಾ ಆಯುಕ್ತರಾಗಿ ಸುಖಬೀರ್ ಸಂಧು ಹಾಗೂ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರಿಸಿದ್ದಾರೆ.
ಇದೇ ಸಂದರ್ಭದಲ್ಲಿ, ಚುನಾವಣಾ ಆಯೋಗದ ನೂತನ ಆಯುಕ್ತರು, ಶನಿವಾರ ಸಂಜೆ 3.00 ಗಂಟೆ ಸುದ್ದಿಗೋಷ್ಠಿ ಕರೆದಿದ್ದು, ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

























































