ನವದೆಹಲಿ: ದೇಶದ ವಿವಿಧ ರಾಜ್ಯಗಳ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ASRTU)ನ 2022 -23ನೇ ಸಾಲಿನ ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿ KSRTC ಮಡಿಲಿಗೆ ಬಿದ್ದಿದೆ.
ಕೆ.ಎಸ್.ಆರ್.ಟಿ.ಸಿ ಗೆ 2022-23ನೇ ಸಾಲಿನ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ASRTU) ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿ (National Transport Excellence Award) ಪ್ರಧಾನ ಮಾಡಲಾಗಿದೆ.
ಶುಕ್ರವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ಕಚೇರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯದ ಕಾರ್ಯದರ್ಶಿ ಅನುರಾಗ್ ಜೈನ್, ಎ.ಎಸ್. ಆರ್. ಟಿ ಯು, ಅಧ್ಯಕ್ಷರ ಡಾ.ಮಾಧವ್ ಖುಸೇಕರ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ದೇಶಕ ಪರೇಶ್ ಗೋಯೆಲ್ ಅವರು KSRTC ನಿಗಮಕ್ಕೆ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ ಉಪಕ್ರಮ ಮತ್ತು ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಉಪಕ್ರಮಕ್ಕಾಗಿ ಎರಡು ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು. ನಿಗಮದ ಬೆಂಗಳೂರು ಪ್ರಾದೇಶಿಕ ಕಾರ್ಯಾಗಾರದ ಕಾರ್ಯ ವ್ಯವಸ್ಥಾಪಕರಾದ ಯಶ್ವಂತ್ ಕುಮಾರ್ ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಪಂಜಾಬ್ ನಾಯಕತ್ವ ಪ್ರಶಸ್ತಿ:
KRTC ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪ ಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ ಲಭಿಸಿರುತ್ತದೆ. ತಾಜ್ ಚಂಡೀಗಡ್‌ನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಚೀಮಾ ಬಾಯ್ಲರ್ಸ್ ಲಿಮಿಟೆಡ್ ಅಧ್ಯಕ್ಷರಾದ ಹರ್ಜಿಂದರ್ ಸಿಂಗ್ ಚೀಮಾ ಅವರು ನಿಗಮಕ್ಕೆ ಪಂಜಾಬ್ ನಾಯಕತ್ವ ಪ್ರಶಸ್ತಿಯನ್ನು ಪ್ರಧಾನ ಮಾಡಿದರು.
ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸಮೂರ್ತಿ ಹಾಗೂ ಕೇಂದ್ರ ಕಚರಿಯ ಅಂಕಿ ಅಂಶ ಅಧಿಕಾರಿ ಸ್ವರ್ಣ ಲತಾ ಎಂ, ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.