ನವದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೇಶದೆಲ್ಲೆಡೆ ಏಳು ಹಂತದಲ್ಲಿ ಮತದಾನ ನಡೆಯಲಿದ್ದು ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ ಎಂದು ತಿಳಿಸಿದರು. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ ಎಂದವರು ತಿಳಿಸಿದರು.
ಇದೇ ವೇಳೆ, ಹಲವು ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯೂ ನಡೆಯಲಿದೆ.
ಮೇ 13 ರಂದು ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಏಪ್ರಿಲ್ 19 ರಂದು ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.






















































