ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಇದೀಗ ಸೀಟು ಹಂಚಿಕೆ ವಿಚಾರದಲ್ಲಿ ಮುನಿಸಿಕೊಂಡಿದೆ. ಈ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಜೆಡಿಎಸ್ ಕೇಳಿರುವ ಮೂರು ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಸಮ್ಮತಿಸಿದೆ.
ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಜೆಪಿ ವರಿಷ್ಠರು ಸಮ್ಮತಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.























































