ನವದೆಹಲಿ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜನ್ ಅತಿಕಾರ್ ಪಕ್ಷವು ಕಾಂಗ್ರೆಸ್ ಜೊತೆ ವಿಲೀನವಾಗಿದೆ. ಪಪ್ಪುಯಾದವ್ ಅವರು ತಮ್ಮ ಜನ್ ಅತಿಕಾರ್ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿರುವುದಾಗಿ ಘೋಷಿಸಿದ್ದಾರೆ.
ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಇತರ ಮುಖಂಡರ ಸಮ್ಮುಖದಲ್ಲಿ ತಮ್ಮ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ಲೀನಗೊಳಿಸುತ್ತಿರುವುದಾಗಿ ಅವರು ತಿಳಿಸಿದರು. ಸರ್ವಾಧಿಕಾರದ ವಿರುದ್ದದ ಹೋರಾಟದಲ್ಲಿ ಕೈಜೋಡಿಸಲು ಹಾಗೂ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಕಾಂಗ್ರೆಸ್ ಸೇರುತ್ತಿರುವುದಾಗಿ ಎಂದು ಯಾದವ್ ಸ್ಪಷ್ಟಪಡಿಸಿದರು.







































































