ನವದೆಹಲಿ: ಮದ್ಯ ನೀತಿ ಹಗರಣ ಆರೋಪ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಬಗ್ಗೆ INDI ಮೈತ್ರಿಕೂಟ ಆಕ್ರೋಶ ಹೊರಹಾಕಿದೆ.
ಆಮ್ ಆದ್ಮಿ ಪಕ್ಷದ ಸಂಚಾಲಕರೂ ಆದ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಗುರುವಾರ ಬಂಧಿಸಿದೆ.
ಈ ಬೆಳವಣಿಗೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಹೆದರಿಕೆಯಿಂದ ಸರ್ವಾಧಿಕಾರಿಯು ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಬಯಸುತ್ತಾನೆ. ಮಾಧ್ಯಮ ಸೇರಿದಂತೆ ಎಲ್ಲ ಸಂಸ್ಥೆಗಳನ್ನು ವಶಪಡಿಸಿಕೊಂಡು, ಪಕ್ಷ ಒಡೆಯುವ, ಸಂಸ್ಥೆಗಳಿಂದ ಹಣ ವಸೂಲಿ ಮಾಡುವ, ವಿರೋಧ ಪಕ್ಷದ ಖಾತೆಯನ್ನು ಸ್ಥಗಿತಗೊಳಿಸುವ ಕೆಲಸ ಮಾಡಿದ್ದಷ್ಟೇ ಅಲ್ಲ, ಚುನಾಯಿತ ಮುಖ್ಯಮಂತ್ರಿಗಳ ಬಂಧನವೂ ಮಾಮೂಲಿಯಾಗಿಬಿಟ್ಟಿದೆ ಎಂದು ಟೀಕಿಸಿದ್ದಾರೆ. ಇದಕ್ಕೆ INDIA ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
























































