ಬೆಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹೆಚ್ಚಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಯಾಗುವ ಸಾಧ್ಯತೆಗಳಿವೆ.
ಇದೇ ವೇಳೆ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ 5 ದಿನಗಾಲ ಕಾಲ ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ವಿಶ್ಲೇಷಿಸಿದೆ.