ಬೆಂಗಳೂರು: ಅಕ್ರಮ ಮದ್ಯ, ನಗದು, ಡ್ರಗ್ಸ್, ಶಸ್ತ್ರಾಸ್ತ್ರಗಳು ಮತ್ತು ಉಚಿತ ವಸ್ತುಗಳ ಸಾಗಣೆಯನ್ನು ತಡೆಯಲು ಅಂತಾರಾಜ್ಯ ಮತ್ತು ಅಂತಾರಾಷ್ಟ್ರೀಯ ಗಡಿಗಳಲ್ಲಿ ಕಟ್ಟುನಿಟ್ಟಾದ ನಿಗಾ ಇಡುವಂತೆ ಸೂಚಿಸಿದೆ ಕೇಂದ್ರ ಚುನಾವಣಾ ಆಯೋಗವು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.
2024ರ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಸಾರ್ವತ್ರಿಕ ಚುನಾವಣೆಗಳಲ್ಲಿ ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತ್ತು ಆಮಿಷ ಮುಕ್ತ ಚುನಾವಣೆಗಾಗಿ ಕಾನೂನು ಮತ್ತು ಸುವ್ಯವಸ್ಥೆ, ಅಕ್ರಮ ಚಟುವಟಿಕೆಗಳ ತಡೆಗಟ್ಟುವಿಕೆ, ವಶಪಡಿಸಿಕೊಳ್ಳುವಿಕೆ ಮತ್ತು ಅಂತಾರಾಜ್ಯ ಮತ್ತು ಅಂತಾರಾಷ್ಟ್ರೀಯ ಗಡಿಗಳಲ್ಲಿ ಕಟ್ಟುನಿಟ್ಟಿನ ಜಾಗರೂಕತೆಯನ್ನು ಪರಿಶೀಲಿಸಲು ಭಾರತದ ಚುನಾವಣಾ ಆಯೋಗವು ಇಂದು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಿರ್ಣಾಯಕ ಸಭೆಯನ್ನು ನಡೆಸಿತು. ಗಡಿಗಳನ್ನು ಕಾಪಾಡುವ ಕೇಂದ್ರೀಯ ಏಜೆನ್ಸಿಗಳ ಜೊತೆಗೆ ನೆರೆಯ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳ ನಡುವೆ ತಡೆರಹಿತ ಸಮನ್ವಯ ಮತ್ತು ಸಹಕಾರಕ್ಕಾಗಿ ಎಲ್ಲಾ ಸಂಬಂಧಿತ ಪಾಲುದಾರರನ್ನು ಒಂದೇ ವೇದಿಕೆಯಲ್ಲಿ ತರುವುದು ಈ ಸಂಯೋಜಿತ ಪರಿಶೀಲನೆಯ ಉದ್ದೇಶವಾಗಿತ್ತು. ಆಯೋಗವು ಪ್ರತಿ ರಾಜ್ಯ/ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ನಿರ್ಣಾಯಕ ಸಮಸ್ಯೆಗಳನ್ನು ಪರಿಶೀಲಿಸಿತು.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರ ಜೊತೆಯಲ್ಲಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಗಡಿಗಳನ್ನು ಕಾಪಾಡುವ ಕೇಂದ್ರ ಏಜೆನ್ಸಿಗಳ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ತಮ್ಮ ಆರಂಭಿಕ ಮಾತುಗಳಲ್ಲಿ ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತ್ತು ಆಮಿಷ ಮುಕ್ತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಆಯೋಗದ ಬದ್ಧತೆಯನ್ನು ಒತ್ತಿಹೇಳಿದರು ಮತ್ತು ಚುನಾವಣಾ ಪ್ರಕ್ರಿಯೆಯ ಪ್ರಾಮಾಣಿಕತೆಯನ್ನು ಎತ್ತಿಹಿಡಿಯಲು ಮತ್ತು ಸಮಾನ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ಒಟ್ಟಾಗಿ ಕೆಲಸ ಮಾಡುವಂತೆ ಎಲ್ಲಾ ಭಾಗೀದಾರರಿಗೆ ಕರೆ ನೀಡಿದರು. ಪ್ರತಿಯೊಬ್ಬ ಮತದಾರರು ಭಯ ಅಥವಾ ಆತಂಕವಿಲ್ಲದೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಅವರು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದರು. ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತ್ತು ಬೆದರಿಕೆ-ಮುಕ್ತ ಚುನಾವಣೆಯ ತಮ್ಮ ‘ಸಂಕಲ್ಪ’ವನ್ನು ದೃಢ ‘ಕ್ರಮ’ಗಳಾಗಿ ಪರಿವರ್ತಿಸುವಂತೆ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಏಜೆನ್ಸಿಗಳಿಗೆ ಅವರು ಕರೆ ನೀಡಿದರು