ಬೆಂಗಳೂರು: ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ವಿಚಾರದಲ್ಲಿ ಕೆ.ಎಸ್. ಈಶ್ವರಪ್ಪ ಅವರ ನಡೆ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆ.ಎಸ್. ಈಶ್ವರಪ್ಪ ಹೇಳಿಕೆ ಕುರಿತಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಆರ್.ಅಶೋಕ್, ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ ಬಳಸಲು ಬಿಜೆಪಿಗೆ ಮಾತ್ರ ಅಧಿಕಾರವಿದೆ. ಚುನಾವಣಾ ಉದ್ದೇಶಕ್ಕೆ ಅವರ ಚಿತ್ರ ಬಳಸುವ ಹಕ್ಕು ಯಾರಿಗೂ ಇಲ್ಲ ಎಂದರು.
ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಒಂದು ಪಕ್ಷದಿಂದ ಆಯ್ಕೆಯಾದ ಬಳಿಕ ಆ ಪಕ್ಷಕ್ಕೆ ಋಣಿಯಾಗಿರಬೇಕು ಎಂದರು.




















































