ಕೋಲಾರ: ನಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಐದು ವರ್ಷವೂ ಮುಂದುವರಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ರೋಡ್ ಶೋ ನಡೆಸಿದ ಸಿಎಂ ಸಿದ್ದರಾಮಯ್ಯ, ‘ನಾವು ಘೋಷಣೆ ಮಾಡಿದ್ದ 5 ಗ್ಯಾರಂಟಿಗಳನ್ನು ಕೂಡ ಅನುಷ್ಠಾನಗೊಳಿಸಿದ್ದೇವೆ. ಈ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತದೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿ ಎಂದು ಬಿಜೆಪಿ ಹೇಳಿತ್ತು. ಆದರೆ, ನಾವು ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ. ಲೋಕಸಭಾ ಚುನಾವಣೆಯ ನಂತರವೂ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ. 5 ವರ್ಷವೂ ಮುಂದುವರಿಯುತ್ತದೆ ಎಂದು ಎಂದು ಸಿಎಂ ಸ್ಪಷ್ಟಪಡಿಸಿದರು.