ವಾರಾಣಸಿ: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿಯ ಕಳುವಾಗಿದ್ದ ಕಾರನ್ನು ಪೊಲೀಸರು ಪತ್ತೆಮಾಡಿದ್ದಾರೆ.
ಜೆ.ಪಿ.ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಎಸ್ಯುವಿ ಕಾರು ಮಾರ್ಚ್ 19ರಂದು ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿನ ಸರ್ವೀಸ್ ಸೆಂಟರ್ನಿಂದ ಕಳುವಾಗಿತ್ತು. ಕಾರಿನ ಪತ್ತೆಗಾಗಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ವಾರಣಾಸಿಯಲ್ಲಿ ಕಾರನ್ನು ಪತ್ತೆಹಚ್ಚಿದ್ದು ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.