ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವೇರುತ್ತಿದ್ದು ರಾಷ್ಟ್ರೀಯ ನಾಯಕರೂ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಇದೇ ವೇಳೆ, ಬಿಜೆಪಿಯ ಸ್ಟಾರ್ ಪ್ರಚಾರಕರಲ್ಲೊಬ್ಬರಾದ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರಾಂತ್ಯದಲ್ಲಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಏಪ್ರಿಲ್ 14ರಂದು ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.
ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ, ಮೊದಲಿಗೆ ಮಧ್ಯಾಹ್ನ 3 ಗಂಟೆಗೆ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಂದು ಸಂಜೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆದಿ ಶೋಭಾ ಕರಂದ್ಲಾಜೆ ಪರವಾಗಿ ಮತಯಾಚಿಸಲಿದ್ದಾರೆ. ಬ್ಯಾಟರಾಯನಪುರ ಮತ್ತು ಹೆಬ್ಬಾಳದಲ್ಲಿ ಮೋದಿ ಅವರು ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.