ಚಿಕ್ಕಬಳ್ಳಾಪುರ: ಕೇಂದ್ರದ ಮಾಜಿ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಎಂ. ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಮುಖ್ಯಮಂತ್ರಿಯೂ ಆಗಿರುವ ವೀರಪ್ಪ ಮೊಯ್ಲಿ ಲೋಕಸಭೆ ಚುನಾವಣೆ ಹೊತ್ತಲ್ಲೆ ಈ ನಿರ್ಧಾರ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ಹಿಂದೆ ಹಲವು ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಎಂ. ವೀರಪ್ಪ ಮೊಯ್ಲಿ ಅವರು ಈ ಬಾರಿಯೂ ಅದೇ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಆದರೆ ಹೈಕಮಾಂಡ್ ಕೊನೆ ಕ್ಷಣದಲ್ಲಿ ಯುವ ನಾಯಕ ರಕ್ಷಾ ರಾಮಯ್ಯಗೆ ಟಿಕೆಟ್ ನೀಡಿದೆ. ಇದರಿಂದ ನಿರಾಸೆಗೊಂಡಿರುವ ಮೊಯ್ಲಿ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ಬೆಂಬಲ ನೀಡುವುದಾಗಿ ಮೊಯ್ಲಿ ಹೇಳಿದ್ದಾರೆ.