ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ, ಆರೋಪಿಗಳನ್ನು ಬೆಂಗಳೂರಿನಲ್ಲಿಂದು ನ್ಯಾಯಾಧೀಶರೆದುರು ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಈ ಆರೋಪಿಗಳನ್ನು 10 ದಿನಗಳ ಕಾಲ ಎನ್‌ಐಎ ವಶಕ್ಕೆ ಒಪ್ಪಿಸಿದೆ.
ಬಾಂಬರ್ ಎನ್ನಲಾದ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಕೋಲ್ಕತ್ತಾದಲ್ಲಿ ಬಂಧಿಸಿರುವ ಎನ್‌ಐಎ ತಂಡ, ಆರೋಪಿಗಳನ್ನು ಇಂದು ಬೆಂಗಳೂರಿಗೆ ಕರೆತಂದಿದೆ. ಬಳಿಕ ಆರೋಪಿಗಳನ್ನು ಮಂಡಿವಾಳದಲ್ಲಿರುವ ಎಫ್ಎಸ್ಎಲ್ ಸೆಂಟರ್ ಬಳಿ ಕರೆದೊಯ್ದು ವಿಚಾರಣೆ ನಡೆಸಿ, ಕೋರಮಂಗಲದಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ. ನ್ಯಾಯಾಧೀಶರು ತಮ್ಮ ನಿವಾಸದಲ್ಲೇ ವಿಚಾರಣೆ ನಡೆಸಿ
ಪ್ರಕರಣ ಕುರಿತಂತೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್‌ಐಎ ಮನವಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಆರೋಪಿಗಳನ್ನು 10 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದರು.


























































