ಬೆಳಗಾವಿ: ಬೆಳಗಾವಿ ಚುನಾವಣಾ ಅಖಾಡದಲ್ಲಿ ಪಂಚಮಸಾಲಿ ಸನುದಾಯದ ಮತಗಳನ್ನು ಸೆಳೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಸರತ್ತು ನಡೆಸಿದ್ದಾರೆ. ಪಂಚಮಸಾಲಿ ಶ್ರೀಗಳ ಆಶೀರ್ವಾದ ಪಡೆದ ಸನ್ನಿವೇಶ ಗಮನಸೆಳೆಯಿತು.
ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ಸು ನಾಮಪತ್ರ ಸಲ್ಲಿಕೆಗೆ ಮುನ್ನ ಪಂಚಮಸಾಲಿ ಸಮುದಾಯದ ಜಗ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿಯಾದರು. ಗೋಪೂಜೆ ನೆರವೇರಿಸಿದ ನಂತರ, ಸಚಿವೆ ಲಕ್ಷ್ಮಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಪತ್ನಿ ಹಿತಾ ಉಪಸ್ಥಿತಿಯಲ್ಲಿ ಜಯಮೃತ್ಯುಂಜಯ ಶ್ರೀಗಳ ಪಾದಪೂಜೆ ನೆರವೇರಿಸಿದರು.
ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ನಾಯಕ ಮುರುಗೇಶ್ ನಿರಾಣಿ ಅವರು ಹೇಳಿಕೆ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪಂಚಮಸಾಲಿ ಸಮುದಾಯಕ್ಕೆ ಸೇರಿದವರಲ್ಲ ಎಂದಿದ್ದರು. ಈ ಹೇಳಿಕೆ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಇದೀಗ ಶ್ರೀಗಳೇ ಲಕ್ಮೀ ಹೆಬ್ಬಾಳ್ಕರ್ ಪುತ್ರನಿಂದ ಪಾದ ಪಾಜೆ ಮಾಡಿಸಿಕೊಂಡ ಬೆಳವಣಿಗೆ ಕುತೂಹಲದ ಕೇಂದ್ರಬಿಂದುವಾಗಿದೆ.