ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಅವರಿಗೆ ದಿಢೀರ್ ಎದೆನೋವು ಕಾಣಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಚಂದ್ರಪ್ಪ ಅವರ ಪರವಾಗಿ ಜಮೀರ್ ಅಹ್ಮದ್ ಅವರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರು. ಈ ನಡುವೆ ಪ್ರಚಾರದ ವೇಳೆ ಜಮೀರ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಜೊತೆಗೆ ಬೆನ್ನು ನೋವೂ ಗೋಚರಿಸಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬಸವೇಶ್ವರ ಮೆಡಿಕಲ್ ಕಾಲೇಜು, ಆಸ್ಪತ್ರೆಗೆ ಸಚಿವ ಜಮೀರ್ ಅಹಮದ್ ಅವರನ್ಬು ದಾಖಲಿಸಲಾಗಿದ್ದು ಯಾವುದೇ ಅಪಾಯ ಇಲ್ಲ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.






















































