ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣದಲ್ಲಿ ಮುಂಬಯಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಮುಂಬಯಿಯ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಭಾನುವಾರ ನಸುಕಿನ ಜಾವ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದರು. ಈ ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ದಾಳಿ ವೇಳೆ ಸಲ್ಮಾನ್ ಖಾನ್ ಮನೆಯಲ್ಲಿದ್ದರು. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈ ಪ್ರಕರಣ ಕುರಿತಂತೆ ತನಿಖೆ ಕೈಂಗೊಂಡಿರು ಮುಂಬಯಿ ಮುಂಬೈ ಅಪರಾಧ ವಿಭಾಗದ ಪೊಲೀಸರು, ಸೋಮವಾರ ಗುಜರಾತ್‌ನ ಭುಜ್ ಎಂಬಲ್ಲಿ ಬಿಹಾರ ಮೂಲದ ವಿಕ್ಕಿ ಸಾಹಬ್ ಗುಪ್ತಾ ಮತ್ತು ಸಾಗರ್ ಶ್ರೀಜೋಗೇಂದ್ರ ಪಾಲ್ ಎಂಬವರನ್ನು ಬಂಧಿಸಿದ್ದಾರೆ.


























































