ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳ ಮೇಲಾಟ ಜೋರಾಗಿದೆ. ಕಳೆದ ಚುನಾವಣೆಯಲ್ಲಿ ಕಳೆದುಕೊಂಡಿರುವ ಕ್ಷೇತ್ರಗಳನ್ನು ಗೆಲ್ಲಲು ಪಣವತೊಟ್ಟಿರುವ ಕಾಂಗ್ರೆಸ್ ಇದೀಗ ಪಕ್ಷದ ರಾಷ್ಟ್ರೀಯ ನಾಯಕರನ್ನು ಪ್ರಚಾಕ್ಕೆ ಕರೆತರಲು ನಿರ್ಧರಿಸಿದೆ
ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ಅವರು ಬುಧವಾರ ಪ್ರಚಾರ:ನಡೆಸಲಿದ್ದಾರೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್, ಎಐಸಿಸಿ ನಾಯಕರಾದ ರಾಹುಲ್ ಗಾಂಧಿ ಅವರು ಬುಧವಾರ ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ, ನಂತರ ಕೋಲಾರಕ್ಕೆ ಹೋಗಿ ಅಲ್ಲಿಂದ ದೆಹಲಿಗೆ ಹೋಗುತ್ತಾರೆ ಎಂದರು.
ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದು ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಅಅವರ ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ ಎಂದು ಡಿಕೆಶಿ ತಿಳಿಸಿದರು.