ಬೆಂಗಳೂರು; ಲೋಕಸಭಾ ಚುನಾವಣಾ ಅಖಾಡವು ಪಕ್ಷಾಂತರ ಪರ್ವಕ್ಕೂ ಸಾಕ್ಷಿಯಾಗುತ್ತಿದೆ. ಬೆಂಗಳೂರಿನಲ್ಲಿ ಬುಧವಾರ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮತ್ತು ಅವರ ಬೆಂಬಲಿಗರು ಪಕ್ಷಕ್ಕೆ ಸೇರ್ಪಡೆಗೊಂಡರು.
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಮತ್ತು ಅವರ ಬೆಂಬಲಿಗರು ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರಾದ ವಿ. ಸುನಿಲ್ ಕುಮಾರ್, ರಾಜ್ಯ ಸಭಾ ಸಂಸದರಾದ ಲೆಹರ್ ಸಿಂಗ್, ಮಾಜಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಕು. ಸಿ. ಮಂಜುಳಾ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ. ವಿ., ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.